ರಾಜ್ಯ

ಕುಡಿದ ಮತ್ತಿನಲ್ಲಿ ಸ್ನೇಹಿತನ ಕಡಿದು ಕೊಲೆ ; ಉಡುಪಿ ಹಳೆ ಬಸ್ ನಿಲ್ದಾಣದಲ್ಲಿ ಘಟನೆ.

ಉಡುಪಿ:  ಅ.22: ಕ್ಷುಲ್ಲಕ ಕಾರಣಕ್ಕಾಗಿ ಯುವಕರ ನಡುವೆ ಜಗಳ ನಡೆದು ಒಬ್ಬಾತ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಬಸ್ ನಿಲ್ದಾಣ ಬಳಿಯ ಕಟ್ಟಡದ ನೆಲ ಅಂತಸ್ತಿನಲ್ಲಿ ನಡೆದಿದೆ.

ಕೊರಂಗ್ರಪಾಡಿ ನಿವಾಸಿ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಎಂಬಾತ ಕೊಲೆಗೈದ ಆರೋಪಿ. ಇಬ್ಬರು ಕೂಡ ಸ್ನೇಹಿತರಾಗಿದ್ದು ಕಂಠಪೂರ್ತಿ ಕುಡಿದು ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ್ದರಿಂದ ಕುಡಿದ ಮತ್ತಿನಲ್ಲಿ ಆರೋಪಿ ಹರಿತವಾದ ಚೂರಿಯಿಂದ ಪ್ರಶಾಂತ್ ಕುತ್ತಿಗೆಯ ಭಾಗಕ್ಕೆ ಕಡಿದಿದ್ದಾನೆ. ಗಂಭೀರ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿದ್ದು, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

/** * External dependencies */ import { Component } from 'react'; class CheckoutSlotErrorBoundary extends Component { state = { errorMessage: '', hasError: false }; static getDerivedStateFromError( error ) { if ( typeof error.statusText !== 'undefined' && typeof error.status !== 'undefined' ) { return { errorMessage: ( <> { error.status } { ': ' + error.statusText } ), hasError: true, }; } return { errorMessage: error.message, hasError: true }; } render() { const { renderError } = this.props; const { errorMessage, hasError } = this.state; if ( hasError ) { if ( typeof renderError === 'function' ) { return renderError( errorMessage ); } return

{ errorMessage }

; } return this.props.children; } } export default CheckoutSlotErrorBoundary;
error: Content is protected !!