ದೇಶ

ಕರ್ನಾಟಕ ದಕ್ಷ ಅಧಿಕಾರಿ,ಮಾಜಿ ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

Click below to Share News

ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಮೇ 28 ಅಧಿಕಾರ ವಹಿಸಿಕೊಂಡರು.
1986ರ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಇದಕ್ಕೂ ಮೊದಲು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸುಮಾರು 37 ವರ್ಷಗಳ ಸುದೀರ್ಘ ಅಧಿಕಾರಾವಧಿಯಲ್ಲಿ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ನಿರ್ಗಮಿತ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರವಧಿ ಇಂದಿಗೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಮೇ 14ರಂದು 2 ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿತ್ತು.
ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಭಾಗವಹಿಸಿದ್ದ ಸಭೆಯಲ್ಲಿ ಸಿಬಿಐ ನಿರ್ದೇಶಕರ ಹುದ್ದೆಗೆ ಪ್ರವೀಣ್ ಸೂದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿತ್ತು.

ಡಿಜಿ-ಐಜಿಪಿ ಆಗುವ ಮುನ್ನ  ಅವರು 2013-14ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ರಾಜ್ಯ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ನ ಎಡಿಜಿಪಿ ಮತ್ತು ಆಡಳಿತದಲ್ಲಿ ಎಡಿಜಿಪಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
2024ರಲ್ಲಿ ಪ್ರವೀಣ್ ಸೂದ್ ಅವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು. ಆದರೆ ಸಿಬಿಐ ನೂತನ ನಿರ್ದೇಶಕರಾಗಿ ನೇಮಿಸಿದ ಕಾರಣ ಇದೀಗ ಮತ್ತೆ ಎರಡು ವರ್ಷಗಳ ಅಧಿಕಾರವಧಿ ವಿಸ್ತರಣೆಗೊಂಡಂತಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!