ದೇಶ

ಏನ್.ಡಿ.ಎ ಜೊತೆ ಜೆ.ಡಿ.ಎಸ್ ಮೈತ್ರಿ : ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ.

Click below to Share News

ದೆಹಲಿ : ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ (ಸೆ. 22)ಗೃಹ ಸಚಿವ ಅಮಿತ್ ಶಾ ಅವರನ್ನ ಅವರ ನಿವಾಸದಲ್ಲಿ ಭೇಟಿಯಾದರು, ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಸೀಟು ಹಂಚಿಕೆಯ ಬಗ್ಗೆ ಮೂವರು ನಾಯಕರು ಚರ್ಚಿಸಿದರು.ಸಭೆಯ ನಂತರ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ “ಜೆಡಿಎಸ್ ನ್ನು ಏನ್ ಡಿ ಎ ಗೆ ಸೇರ್ಪಡೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನ ಭೇಟಿಯಾದೆ. ನಾವು ಅವರನ್ನ ಏನ್ ಡಿ ಎ ಗೆ ಹೃತ್ತೂರ್ವಕವಾಗಿ ಸ್ವಾಗತಿಸುತ್ತೇವೆ” ಎಂದರು.


ಇನ್ನು “ಇದು ಏನ್ ಡಿ ಎ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತ, ಬಲವಾದ ಭಾರತದ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದಿರುವ ನಡ್ಡಾ ಅವರು ಸಭೆಯ ಫೋಟೋವನ್ನ ಸಹ ಹಂಚಿಕೊಂಡಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಈ ವರ್ಷದ ಮೇ ತಿಂಗಳಲ್ಲಿ ನಡೆದ ವಿಧಾನಸಭಾಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಅದೇ ಸಮಯದಲ್ಲಿ ಬಿಜೆಪಿ ಅಧಿಕಾರವನ್ನ ಕಳೆದುಕೊಳ್ಳಬೇಕಾಯಿತು. ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿತ್ತು.

ಅಂತಹ ಪರಿಸ್ಥಿತಿಯಲ್ಲಿ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಮೈತ್ರಿಯನ್ನು ಮುಖ್ಯವೆಂದು ಪರಿಗಣಿಸಲಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆದ್ದಿದ್ದವು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!