ಸಮಗ್ರ ಸುದ್ದಿ

ಚೆಲ್ಯಡ್ಕ ಸೇತುವೆ ಮುಳುಗಡೆ.ವಾಹನ ಸಂಚಾರ ಸ್ಥಗಿತ.

Click below to Share News

ಬೆಟ್ಟಂಪಾಡಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದಿನ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರ ಗುರುವಾರ ಮುಂಜಾನೆ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.

ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ. ಲೋಕೋಪಯೋಗಿ ಇಲಾಖೆಯ ಮೂಲಕ ಸರ್ವಋತು ಸೇತುವೆ ನಿರ್ಮಾಣ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದರೂ, ಮನವಿ ಸಲ್ಲಿಸಿದರೂ ಜನಪ್ರತಿನಿಧಿಗಳು ಅಧಿಕಾರಿಗಳಲ್ಲಿ ಇಚ್ಛಾ ಶಕ್ತಿಯ ಕೊರತೆ ಎದ್ದು ಕಾಣುತ್ತಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!