ಸಮಗ್ರ ಸುದ್ದಿ

ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವು

Click below to Share News

ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಮೃತಪಟ್ಟ ಯುವಕ ಮೈಸೂರು ಮೂಲದ 7 ಯುವಕರ ತಂಡ ಟ್ರಕ್ಕಿಂಗ್ ಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!