ಸಮಗ್ರ ಸುದ್ದಿ

ಸಿದ್ದರಾಮಯ್ಯಗೆ ಸಿಎಂ ಪಟ್ಟ: ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ

Click below to Share News

ಬೆಂಗಳೂರು :ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಿಸುವುದು ಬಹುತೇಕ ಪಕ್ಕಾ ಆಗಿದೆ. ಇನ್ನೊಂದೆಡೆ ಹಲವು ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಪ್ರಚಂಡ ಗೆಲುವು ಹಾಗೂ ದೊಡ್ಡ ಮಟ್ಟದಲ್ಲಿ ಸೀಟು ಬಂದಿವೆ. ಹೀಗಾಗಿ ಸಿಎಂ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಪ್ಲಾನ್ ಮಾಡಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 18 ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.


ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮತ್ತು ಕಾಂಗ್ರೆಸ್‌ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.

2013 ರಲ್ಲೂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ ನಡೆಸಲಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!