ಸಮಗ್ರ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ದಿನೇಶ್ ಗುಂಡೂರಾವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಅವರು ಮೊದಲ ಬಾರಿಗೆ ಭಾನುವಾರ ಬೆಳಗ್ಗೆ ಜಿಲ್ಲೆಗೆ ಆಗಮಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆ ಬಸ್ ಪ್ರಯಾಣ ಉಚಿತ ಯೋಜನೆ ಇಂದಿನಿಂದ ಜಾರಿಗೆ ಬರಲಿದ್ದು, ಜಿಲ್ಲೆಯಲ್ಲಿ ಈ ಯೋಜನೆಯ ಜಾರಿ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಆಗಮಿಸಿದ್ದಾರೆ.ಅಪರಾಹ್ನ 3 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಮಂಗಳೂರಿಗೆ ಆಗಮಿಸಿದ ದಿನೇಶ್ ಗುಂಡೂರಾವ್ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಐವನ್ ಡಿ ಸೋಜಾ, ಮತ್ತಿತರ ಕಾಂಗ್ರೆಸ್ ಮುಖಂಡರು ಸಚಿವರ ಜೊತೆಗೆ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!