ಸಮಗ್ರ ಸುದ್ದಿ
ನಾಳೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.