ಸಮಗ್ರ ಸುದ್ದಿ

ಮೂಲ್ಕಿ : ಬೈಕ್-ಕಾರು ಭೀಕರ ಅಪಘಾತ : ಖಾಸಗಿ ಸಂಸ್ಥೆಯ ಉದ್ಯೋಗದಲ್ಲಿದ್ದ ಯುವತಿ ಸ್ಥಳದಲ್ಲೇ ಮೃತ್ಯು.!!

ಮಂಗಳೂರು : ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಕೊನೆಯುಸಿರೆಳೆದು ಸವಾರ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ.

ಕೊನೆಯುಸಿರೆಳೆದ ಯುವತಿಯನ್ನು ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮಪಂಚಾಯತ್‌ ವ್ಯಾಪ್ತಿಯ ಬಾಕ್ರಬೈಲು ನಿವಾಸಿ ಜಯರಾಮ ಶೆಟ್ಟಿ ಅವರ ಪುತ್ರಿ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದೆ. ಗಾಯಾಳು ಬೈಕ್ ಸವಾರನನ್ನು ಬಂಟ್ವಾಳ ತಾಲೂಕು ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ಶೆಟ್ಟಿ (21)ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮೂಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಹೋಂಡಾ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಬೈಕನ್ನು ದೂಡಿಕೊಂಡು ಹೋಗಿದ್ದು, ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಪಘಾತಕ್ಕೀಡಾದ ಎರಡು ವಾಹನಗಳನ್ನು ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಎಸಿಪಿ ಗೀತಾ ಕುಲಕರ್ಣಿ, ಇನ್‌ಸ್ಪೆಕ್ಟರ್ ಶರೀಫ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!