ಸಮಗ್ರ ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ ನ್ಯಾಯಾಲಯ ಆದೇಶ

Click below to Share News

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ
ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಜತೆಗೆ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್-11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ ಜು.19ರಂದು ಈ ಕುರಿತಂತೆ ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಯಪ್, ಫೇಸ್ ಬುಕ್, ಇನ್ನಾ ಗ್ರಾಮ್, ಯೂ- ಟ್ಯೂಬ್, ಟಿ.ವಿ.ಚಾನೆಲ್ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು’ ಎಂದು ನಿರ್ಬಂಧಿಸಿ ಆದೇಶಿಸಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!