ಸಮಗ್ರ ಸುದ್ದಿ
ವಿಟ್ಲ : ವಿಷ ಪದಾರ್ಥ ಸೇವಿಸಿ ವಿವಾಹಿತ ಮಹಿಳೆ ಆತ್ಮಹತ್ಯೆ..!
ವಿಟ್ಲ : ವಿವಾಹಿತ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ.
ಸುರೇಶ್ ಚೌಟ ಎಂಬವರ ಮಗಳು ಪ್ರೀತಿ ಶೆಟ್ಟಿ ರವರು ತನ್ನ ಮಗುವನ್ನು ಕಳೆದುಕೊಂಡು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆಗೊಂಡು ಜೂ.9 ರಂದು ತೋಟಕ್ಕೆ ಸಿಂಪಡಿಸಲೆಂದು ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬ ಮನೆಯಲ್ಲಿ ತಂದಿಟ್ಟಿದ್ದ ಯಾವುದೋ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.
ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ವೇಳೆ ಮೃತಪಟ್ಟಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ವಿಟ್ಲ ಠಾಣೆಯಲ್ಲಿ ಕಲಂ:174 ಸಿಆರ್ಪಿಸಿ ರಂತೆ ಪ್ರಕರಣ ದಾಖಲಾಗಿದೆ.