ರಾಜ್ಯ

ನೈತಿಕ ಪೊಲೀಸ್‌ಗಿರಿಗೆ ಕಡಿವಾಣ : ದ.ಕನ್ನಡ ಜಿಲ್ಲಾ ಉಸ್ತುವಾರಿಯಾದ ಬೆನ್ನಲ್ಲೇ ಗುಡುಗಿದ ಗುಂಡುರಾವ್. !!

Click below to Share News

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹೊಣೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೆಗಲೇರಿದೆ. ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗುಂಡುರಾವ್, ದಕ್ಷಿಣ ಕನ್ನಡದಲ್ಲಿನ ನೈತಿಕ ಪೊಲೀಸ್‌ಗಿರಿ ಅಂತ್ಯಹಾಡುವುದಾಗಿ ಹೇಳಿದ್ದಾರೆ.  ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ಅಲ್ಲಿನ ಜನ ಶಾಂತಿ ಸೌಹಾರ್ಧತೆಯಿಂದ ಬಾಳಬೇಕು ಎಂದು ಗುಂಡುರಾವ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು, ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ. ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿ ಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರು ಕೆಲಸ ಮಾಡಬೇಕು ಎಂದು ಗುಂಡುರಾವ್ ಹೇಳಿದ್ದಾರೆ. ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆ ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಮರುತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ, ಅದಕ್ಕೆ ಡಿಪಿಆರ್ ಕೂಡ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ತನಿಖೆಗೆ ಆದೇಶ ಹೊರಬೀಳಲಿದೆ ಎಂದು ಗುಂಡುರಾವ್ ಹೇಳಿದ್ದಾರೆ. ಚಾಮರಾಜನಗರ ಆಕ್ಸಿನ್ ದುರಂತ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಗೆ ಒಳಪಡುತ್ತದೆ. ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಆರೋಗ್ಯ ಇಲಾಖೆ ಸಮನ್ವಯದಿಂದ ತನಿಖೆ ಮಾಡಬೇಕಿದೆ ಎಂದಿದ್ದಾರೆ.ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ ಈ ತನಿಖೆ ಪೂರ್ಣಗೊಂಡಿಲ್ಲ. ಹಾಗಾಗಿ ನಾವು ಮರುತನಿಖೆ ನಡಸುತ್ತೇವೆ ಎಂದಿದ್ದಾರೆ.  
ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಹಲವು ಸಚಿವರ ಸ್ಥಾನ ಪಲ್ಲಟವಾಗಿದೆ. ಬೆಂಗಳೂರು ನಗರ ಜಿಲ್ಲೆಯ ದಿನೇಶ್ ಗುಂಡುರಾವ್ ಅವರಿಗೆ ದಕ್ಷಿಣ ಕನ್ನಡ ಉಸ್ತುವಾರಿ ನೀಡಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!