ರಾಜ್ಯ

ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ.

Click below to Share News

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP Karnataka) ಬಿ.ವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್‌, ರಾಜುಗೌಡ ನಾಯಕ್ ಹಾಗೂ ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ.ರಾಜೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ ಹಾಗೂ ಜೆ.ಪ್ರೀತಮ್ ಗೌಡ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಯದರ್ಶಿಯಾಗಿ ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವರನ್ನು ಆಯ್ಕೆ ನಡೆಸಲಾಗಿದೆ.
ಕೇಸರಿ ಭದ್ರಕೋಟೆಯಾಗಿರುವ ಉಭಯ ಜಿಲ್ಲೆಗೆ ತಲಾ ಒಂದೊಂದು ಹುದ್ದೆ ಘೋಷಣೆಯಾಗಿದ್ದು, ದಕ್ಷಿಣಕನ್ನಡದಿಂದ ಬ್ರಿಜೇಶ್ ಚೌಟರನ್ನು ಹಾಗೂ ಉಡುಪಿಯಿಂದ ಮಾಜಿ ಸಚಿವ ಸುನೀಲ್ ಕುಮಾ‌ರ್ ಆಯ್ಕೆ ಮಾಡಲಾಗಿದೆ.

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ.ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್‌.ಟಿ.ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್‌.ಸಿ.ಮೋರ್ಚಾ ಅಧ್ಯಕ್ಷರಾಗಿ ಎಸ್.ಮಂಜುನಾಥ್(ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ ರೈತ ಮೋರ್ಚಾ ಅಧ್ಯಕ್ಷರಾಗಿ ಎ.ಎಸ್‌.ಪಾಟೀಲ್‌ ನಡಹಳ್ಳಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅನಿಲ್‌ ಥಾಮಸ್‌ ಅವರನ್ನು ನೇಮಕ ಮಾಡಲಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!