ರಾಜ್ಯ

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಬಿಜೆಪಿ “ಫೈರ್ ಬ್ರಾಂಡ್” ಶಾಸಕ ಬಸನಗೌಡ ಯತ್ನಾಳ್ – ಆಸ್ಪತ್ರೆಗೆ ರವಾನೆ

Click below to Share News

ಬೆಂಗಳೂರು : ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಶಾಸಕ ಬಸನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ.


ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಬಿಪಿಯಲ್ಲಿ ಏಳಿರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು, ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಅಂಬ್ಯುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿದೆ ಅಂತ ತಿಳಿದು ಬಂದಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!