ರಾಜ್ಯ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Click below to Share News

ಬೆಂಗಳೂರು : ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್, ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಶಾಂತಿನಗರದ ಕೆಎಸ್‌ಆರ್‌ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಸುಧೀರ್ಘ ಚರ್ಚೆ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್, ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಬಹುದು ಎಂದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!