ರಾಜ್ಯ

ಬಸ್‌ನಲ್ಲಿ ವಿಷ ಸೇವಿಸಿ ನಿದ್ರಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು

Click below to Share News

ಹಾವೇರಿ: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆ ಪ್ರೇಮಿಗಳು ಸ್ತ್ರೀಪರ್ ಕೋಚ್ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿಯಲ್ಲಿ ನಡೆದ ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹೇಮಾ ರಾಮಕೃಷ್ಣಪ್ಪ (20) ಮೃತ ಯುವತಿಬಾಗಲಕೋಟೆ ಮೂಲದ ಅಖಿಲ್ ಮತ್ತು ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಬೆಂಗಳೂರು ಮೂಲದ ಹೇಮಾ ರಾಮಕೃಷ್ಣಪ್ಪ ಪರಸ್ಪರ ಪ್ರೀತಿಸುತ್ತಿದ್ದು, ಬಾಳುವುದಾದರೆ ಇಬ್ಬರೂ ಜೊತೆಗೆ ಬಾಳುವ ನಿರ್ಣಯ ಮಾಡಿಕೊಂಡು ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನೊಂದ ಅಖಿಲ್ ಮತ್ತು ಹೇಮಾ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ತಮ್ಮ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನೊಂದ ಪ್ರೇಮಿಗಳು ಸ್ಲಿಪರ್ ಕೋಚ್ ಬಸ್ ಹತ್ತಿದ್ದಾರೆ. ನಂತರ ವಿಷ ಸೇವಿಸಿಕೊಂಡ ಅಖಿಲ್ ಮತ್ತು ಹೇಮಾ ನಿದ್ರಿಸಿದ್ದಾರೆ. ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.ಕೂಡಲೇ ಎಚ್ಚೆತ್ತ ಪ್ರಯಾಣಿಕರು ಸ್ಥಳೀಯರ ಸಹಾಯದಿಂದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರೂ ದುರಾದೃಷ್ಟವಶಾತ್ ಹೇಮಾ ಕೊನೆಯುಸಿರೆಳೆದಿದ್ದಾಳೆ. ಪ್ರಜ್ಞೆ ಕಳೆದುಕೊಂಡಿದ್ದ ಅಖಿಲ್ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಚಳಗೇರಿ ಟೋಲ್ 5 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ರಾಣೆಬೆನ್ನೂರು ಪೊಲೀಸ್ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೂ ಮುನ್ನ ಪೋಷಕರಿಗೆ ಹೇಮಾ ಹೇಳಿದ್ದೇನು?

ಆತ್ಮಹತ್ಯೆಗೂ ಮುನ್ನ ಹೇಮಾ ಪೋಷಕರಿಗೆ ದೂರವಾಣಿ ಕರೆ ಮಾಡಿದ್ದಾಳೆ. ನಮ್ಮ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗುತ್ತಾ ಇದ್ದೇವೆ ಪೋಷಕರಿಗೆ ತಿಳಿಸಿದ್ದಾಳೆ. ಇಷ್ಟು ಹೇಳಿ ಕಾಲ್ ಕಟ್ ಮಾಡಿದ್ದ ಹೇಮಾ ಮತ್ತು ಅಖಿಲ್ ಬಾಂಬೆಗೆ ಹೋಗದೆ ಬಸ್ನಲ್ಲಿ ವಿಷ ಸೇವಿಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!