ರಾಜ್ಯ

ಮಂಗಳೂರು: ಏ.04: ಇಂದು ಕ್ಯಾ| ಬೃಜೇಶ್‌ ಚೌಟ ನಾಮಪತ್ರ ಸಲ್ಲಿಕೆ.

Click below to Share News

ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ| ಬೃಜೇಶ್‌ ಚೌಟ ಎ. 4ರಂದು(ಇಂದು )ಬೆಳಗ್ಗೆ 9ಕ್ಕೆ ಬಂಟ್ಸ್‌ ಹಾಸ್ಟೆಲ್‌ ಸಮೀಪದ ಚುನಾವಣಾ ಕಚೇರಿಯಿಂದ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಬೃಹತ್ ಮೆರವಣಿಗೆಯೊಂದಿಗೆ ತೆರಳಿ 11 ಗಂಟೆಗೆ ನಾಮಪತ್ರ ಸಲ್ಲಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಕ್ಷದ ಎಲ್ಲ ಶಾಸಕರೂ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಇರುವರು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‌ ಕುಮಾರ್‌, ರಾಜ್ಯ ಚುನಾವಣ ಸಂಚಾಲಕ ಸುನಿಲ್‌ ಕುಮಾರ್‌ ಪಾಲ್ಗೊಳ್ಳುವರು ಎಂದು ತಿಳಿದು ಬಂದಿದೆ‌.
ಎ. 5ರಂದು ಪ್ರಚಾರ ಸಭೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಹಿತ ಹಿರಿಯ ರಾಷ್ಟ್ರೀಯ ಮುಖಂಡರನ್ನು ಆಹ್ವಾನಿಸಲಾಗಿದೆ ಎಂದರಲ್ಲದೇ, ಮನೆ ಮನೆಗೆ ಕಾರ್ಯಕರ್ತರು ತೆರಳಿ ಪ್ರಚಾರಅಭಿಯಾನ ನಡೆಸುವರು.
ಎ. 21ರಂದು ನಡೆಯುವ ಮಹಾ ಸಂಪರ್ಕ ಅಭಿಯಾನದಲ್ಲಿ ಏಕಕಾಲದಲ್ಲಿ ಎಲ್ಲ ಮನೆಗಳನ್ನೂ ತಲುಪಲಾಗುವುದು ಎಂದರು,ಮುಖಂಡರಾದ ನಿತಿನ್‌ ಕುಮಾರ್‌, ಸಂಜಯ್‌ ಪ್ರಭು, ರವಿಶಂಕರ ಮಿಜಾರು, ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!