ಕೈ ಬೀಸಿ ಕರೆಯುತ್ತಿದೆ ಮಂಗಳೂರು ದಸರಾ – ಸ್ವಾಗತಿಸುತ್ತಿದೆ ಬೆಳಕಿನ ಚಿತ್ತಾರ. : ಅ.13 ರಂದು ಅದ್ದೂರಿ ದಸರಾ ಮೆರವಣಿಗೆ ನಡೆಯಲಿದೆ.
ಮಂಗಳೂರು : ದಸರಾ ಎಂದರೆ ಮೊದಲು ನೆನಪಾಗುವುದು ಮೈಸೂರು ದಸರಾ(Mysuru Dasara). ಇತ್ತೀಚಿನ ದಿನಗಳಲ್ಲಿ ಮಂಗಳೂರು ದಸರಾ (Mangaluru Dasara) ಕೂಡ ಮೈಸೂರು ದಸರಾದಷ್ಟೇ ಪ್ರಖ್ಯಾತಿ ಪಡೆದಿದೆ. ಇದೀಗ ದಸರಾ ಸಂಭ್ರಮದಲ್ಲಿ ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ.
ಮಂಗಳೂರು ದಸರಾ ನಡೆಯುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ (Kudroli Shri Gokarnanatheshwara Kshetra) ಸಂಜೆಯಾಗುತ್ತಿದ್ದಂತೆ ಭೂಲೋಕದ ಸ್ವರ್ಗದಂತೆ ಕಂಗೊಳಿಸುತ್ತದೆ. ದಸರಾ ಮೆರವಣಿಗೆ ಹಾದುಹೋಗುವ ನಗರದ ಸುಮಾರು 7ಕಿ.ಮೀ. ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಬರೋಬ್ಬರಿ 22 ಲಕ್ಷ ಬಲ್ಬುಗಳನ್ನು ಬಳಸಿ ದೀಪಾಲಂಕಾರ ಮಾಡಲಾಗಿದೆ. ಈ ಬೆಳಕಿನ ಚಿತ್ತಾರ ಮಂಗಳೂರು ದಸರಾವನ್ನು ಮತ್ತಷ್ಟು ಕಂಗೊಳಿಸುವಂತೆ ಮಾಡಿದೆ.
7 ಕಿ.ಮೀ. ರಸ್ತೆಯುದ್ದಕ್ಕೂ ಮಾಡಿರುವ ವಿದ್ಯುತ್ ದೀಪಾಲಂಕಾರದಲ್ಲಿ 10 ಲಕ್ಷ ದೊಡ್ಡ ಪ್ರಮಾಣದ ಬಲ್ಬ್ಗಳು ಸೇರಿದಂತೆ ಒಟ್ಟು 22 ಲಕ್ಷಕ್ಕೂ ಅಧಿಕ ವಿದ್ಯುತ್ ದೀಪ ಳಿಂದ ಶೃಂಗರಿಸಲಾಗಿದೆ. ದಸರಾದ ಹಿನ್ನೆಲೆಯಲ್ಲಿ ನವರಾತ್ರಿ ಆರಂಭಗೊಂಡ ಮೊದಲ ದಿನದಿಂದ 10 ದಿನಗಳ ಕಾಲ ಸಂಜೆ 7 ಗಂಟೆಯಾಗುತ್ತಿದ್ದಂತೆ ನಗರವು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತದೆ. ವಾಹನ ಜನಜಂಗುಳಿಯಿಂದ ಕೂಡಿದ ರಸ್ತೆಗಳು ಇದೀಗ ಬೆಳಕಿನ ಚಿತ್ತಾರದಿಂದ ಮಧುವಣಗಿತ್ತಿಯಂತೆ ಅಲಂಕೃತಗೊಂಡಿದೆ.
ಮಂಗಳೂರು ದಸರಾವನ್ನು ಕಟ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಅ.13 ರಂದು ಅದ್ದೂರಿ ದಸರಾ ಮೆರವಣಿಗೆ ನಡೆಯಲಿದ್ದು, ಭರ್ಜರಿಯಾಗಿ ಅಲಂಕೃತಗೊಂಡಿದೆ.