ರಾಜ್ಯ

ಕರ್ನಾಟಕ, ತೆಲಂಗಾಣ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ NIA ದಾಳಿ.

Click below to Share News

ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ.
ಇದೇ ಪ್ರಕರಣ ಸಂಬಂಧ ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶೋಯಬ್ ಮಿರ್ಜಾ ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!