ರಾಜ್ಯ
ಕೇರಳದ ಎರ್ನಾಕುಲಂನಲ್ಲಿ ಭೀಕರ ಸ್ಪೋಟ..!
ಕೇರಳ: ಎರ್ನಾಕುಲಂನಲ್ಲಿರುವ ಕನ್ವೆನ್ಸನ್ ಸೆಂಟರ್ ನಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 23 ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಕಾಏಕಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಇದೊಂದು ಉಗ್ರರ ದಾಳಿಯ ಶಂಕೆ ವ್ಯಕ್ತವಾಗಿದೆ. ಈ ಘಟನೆ ಎರ್ನಾಕುಲಂನ ಕಲಮಕ್ಕೇರಿಯಲ್ಲಿರುವ ಜಾಮ್ರಾ ಇಂಟರ್‌ನ್ಯಾಷನಲ್ ಸಭಾಭವನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಬೆಳಗ್ಗಿನ ಪ್ರಾರ್ಥನೆಗಾಗಿ ನೂರಾರು ಜನ ಸೇರಿದ್ದು, ಬೆಳಿಗ್ಗೆ 9.45ಕ್ಕೆ ಈ ಘಟನೆ ನಡೆದಿದೆ. ಸತತವಾಗಿ ಮೂರು ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಉಂಟಾದ ಬೆಂಕಿ ಹೊತ್ತುತ್ತಲೇ ನೂರಾರು ಜನ ಹೊರಗೆ ಓಡಿ ಬಂದಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ.