ತಾಲೂಕು ಸುದ್ದಿ

ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಪಿಕಪ್ ಚಾಲಕ ಮೃತ್ಯು..!!!

Click below to Share News

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ.

ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ (43) ಎಂದು ಗುರುತಿಸಲಾಗಿದೆ. ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ಪಿಕಪ್ ವಾಹನ ದಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದು, ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ವೀಕ್ಷಕ ನ್ಯೂಸ್ ಗುಂಪಿಗೆ ಸೇರಲು ಈ ಕೆಳಗಿನ ಲಿಂಕ್ ಒತ್ತಿ.

https://chat.whatsapp.com/Jo0WSS41H91JtLovwy2HP4https://chat.whatsapp.com/Jo0WSS41H91JtLovwy2HP4

Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!