ತಾಲೂಕು ಸುದ್ದಿ
ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಪ್ರಧಾನ.
ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗಣನೀಯ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆ.19ರಂದು ಬ್ಯಾಂಕ್ ಉತ್ಕೃಷ್ಟ ಸಹಕಾರಿ ಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ಸತೀಶ್ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸೀತಾರಾಮ ಗೌಡ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಚಂದಪ್ಪ ಪೂಜಾರಿ ಕಾಡ್ಯ ಅಂಬೋಸ್ ಡಿ’ಸೋಜ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೂಟ್ಟು, ಎಸ್.ಬಿ. ಜಯರಾಮ ರೈ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.