ತಾಲೂಕು ಸುದ್ದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..!

Click below to Share News

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಇತ್ತೀಚೆಗೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ತಂದು ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!