ತಾಲೂಕು ಸುದ್ದಿ

ಬೆಳ್ತಂಗಡಿ : ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ

Click below to Share News

ಬೆಳ್ತಂಗಡಿ : ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನು, ವಿಚಾರಣೆಗಾಗಿ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಸದ್ರಿಯವರ ಮನೆಗೆ ತೆರಳಿರುತ್ತಾರೆ.

ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳೀನ್‌ ಕುಮಾ‌ರ್ ಕಟೀಲ್ ರವರು, ತಾನೇ ಖುದ್ದಾಗಿ (HARISH POONJA)ಹರೀಶ್‌ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿರುತ್ತಾರೆ.

ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!