ತಾಲೂಕು ಸುದ್ದಿ
ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ.
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನ.28 ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು.
ಸಹಕಾರಿ ಸಂಘದ ಅಧ್ಯಕ್ಷರಾದ ನವೀನ್ ಡಿ. ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಪವಿತ್ರಾ ಕೆ.ಪಿ., ನಿರ್ದೇಶಕರಾದ ವಿಶ್ವನಾಥ ಬಲ್ಯಾಯ ಮುಂಡೋಡಿ, ಪ್ರವೀಣ್ ಕುಮಾರ್ ಶೆಟ್ಟಿ ಜಯರಾಮ ಪೂಜಾರಿ ಒತ್ತೆಮುಂಡೂರು, ವಿ. ಬಾಬು ಶೆಟ್ಟಿ ವೀರಮಂಗಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ್ ಎಚ್, ಸಿಬ್ಬಂದಿಗಳಾದ ಸಂದೀಪ್ ಕೆ., ಜಯರಾಮ ಬಿ., ರೋಹಿತ್ ಪಿ., ಅಶ್ವಿತಾ ಎ., ರೇಷ್ಮಾ ಎಂ., ನಳಿನಿ ಬಿ. ಕೆ., ಜೀತೇಶ್ ಯಸ್. ಉಪಸ್ಥಿತರಿದ್ದರು.