ತಾಲೂಕು ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಜೂನ್ 30ರ ಗಡು ನೀಡಿದ ಏನ್ಐಎ

Click below to Share News

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆಯನ್ನು ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಮಾಡುತ್ತಿದ್ದಾರೆ.
ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.

ಸುಳ್ಯದ ಕಲ್ಲುಮುಟ್ಟುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಯೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!