ತಾಲೂಕು ಸುದ್ದಿ

ಪುತ್ತೂರು : ಕಲ್ಲೇಗ ಟೈಗರ್ಸ್ ನಾಯಕ ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ – ಇಬ್ಬರು ಠಾಣೆಗೆ ಶರಣು..!

Click below to Share News

ಪುತ್ತೂರು : ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಅಕ್ಷಯ್ ಕಲ್ಲೇಗ ಅವರನ್ನು ಬರ್ಬರ ಹತ್ಯೆ ಮಾಡಿದ್ದರೆ.

ಅಕ್ಷಯ್ ಮೃತದೇಹ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಗಿಡಗಂಟಿಗಳಿಂದ ಅವೃತ್ತವಾದ ಹಡೀಲು ಬಿದ್ದ ಜಾಗದಲ್ಲಿ ಬಿದ್ದು ಕೊಂಡಿತ್ತು. ಒಟ್ಟು ಮೂವರಿದ್ದ ತಂಡ ಕೃತ್ಯ ಎಸಗಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಪೈಕಿ ಇಬ್ಬರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಬನ್ನೂರು ನಿವಾಸಿ ಮನೀಷ್, ಚೇತು ಬಂಧಿತ ಆರೋಪಿಗಳಾಗಿದ್ದು, ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ನಷ್ಟದ ಮೊತ್ತ ಮಾತನಾಡಲೆಂದು ಪುನ: ಅದೇ ತಂಡ ಅಕ್ಷಯ್ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ ಕೇವಲ 2 ಸಾವಿರ ರೂಪಾಯಿ ವಿಚಾರವಾಗಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶಂಕೆ ವ್ಯಕ್ತವಾಗುತ್ತಿದೆ.
ಹತ್ಯೆಯಾದ 24ರ ಹರೆಯದ ಅಕ್ಷಯ್ ಕಲ್ಲೇಗ ವಿವೇಕಾನಂದ ಕಾಲೇಜ್ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!