ತಾಲೂಕು ಸುದ್ದಿ

ಪುತ್ತೂರು : ನಾಪತ್ತೆಯಾಗಿದ್ದ ಪುತ್ತೂರು ಬೆಥನಿ ವಿದ್ಯಾರ್ಥಿನಿ ಫಾತಿಮಾ ಅಫ್ತಾ ಕಾಸರಗೋಡಿನಲ್ಲಿ ಪತ್ತೆ.

Click below to Share News

ಪುತ್ತೂರು: ಶಾಲೆಗೆಂದು ತೆರಳಿ ನಾಪತ್ತೆಯಾಗಿದ್ದ ಬಾಲಕಿ ಇದೀಗ ಕಾಸರಗೋಡಿನಲ್ಲಿ ಪತ್ತೆಯಾಗಿದ್ದಾಳೆ.
ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಫಾತಿಮಾ ಅಫ್ಘಾ ಮನೆಯಿಂದ ಶಾಲೆಗೆಂದು ತೆರಳಿದ್ದು, ಆದರೆ ಶಾಲೆಗೆ ಹೋಗಿರಲಿಲ್ಲ.

ಇಂದು ಶಾಲೆಯಲ್ಲಿ ಪರೀಕ್ಷೆ ಇತ್ತು ಎನ್ನಲಾಗಿದ್ದು, ಅಪ್ಪ ಶಾಲೆಗೆ ಹೋಗದೆ ನೇರವಾಗಿ ಪರ್ಲಡ್ಕದ ಬಾಲವನಕ್ಕೆ ತೆರಳಿದ್ದಳು. ಐಡಿ ಕಾರ್ಡ್ ಇಲ್ಲದ ಕಾರಣ ಬಾಲವನದ ಸಿಬ್ಬಂದಿ ಆಕೆಯನ್ನು ಒಳಗೆ ಬಿಟ್ಟಿರಲಿಲ್ಲ. ಅಲ್ಲಿಂದ ಹಿಂದಿರುಗಿ ಬಂದ ಅಮ್ಮ ಪರ್ಲಡ್ಕದಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ತೆರಳಿ ನಾನು ಶಾಲೆಗೆ ಹೋಗಿಲ್ಲ, ಇಂದು ಇಲ್ಲಿ ಇರುವುದಾಗಿ ಹೇಳಿದ್ದಾಳೆ. ಸಂಬಂಧಿಕರ ಮನೆಮಂದಿ ಆಕೆಯನ್ನು ಶಾಲೆಗೆ ಬಿಟ್ಟು ಬರಲು ಮುಂದಾದಾಗ ಅಪ್ಪ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. ಮನೆಯ ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದರೂ ಆಕೆ ಕಾಣಸಿಕ್ಕಿರಲಿಲ್ಲ. ಸಂಬಂಧಿಕರಿಂದ ಮಾಹಿತಿ ಪಡೆದ ಮನೆಯವರು ಬೆಳಗ್ಗಿನಿಂದಲೇ ಅಪ್ಪಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆದರೆ ಅಪ್ಪ ಎಲ್ಲಿಯೂ ಪತ್ತೆಯಾಗಿಲ್ಲ.
ಬಳ್ಳಾಡ್ ನಿವಾಸಿ ಅಶ್ರಫ್ ಎಂಬವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮಾ ಅಘ್ನ ನಾಪತ್ತೆಯಾಗಿರುವುದಾಗಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಫಾತಿಮಾ ಅಪ್ಪ ಕಾಸರಗೋಡಿನಲ್ಲಿ ಪತ್ತೆಯಾಗಿದ್ದು, ಪುತ್ತೂರಿಗೆ ಕರೆತರಲು ಮನೆಮಂದಿ ಪೊಲೀಸರೊಂದಿಗೆ ಕಾಸರಗೋಡಿಗೆ ತೆರಳಿದ್ದಾರೆ.

ನಗರದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಕಲಿಯುತ್ತಿರುವ ಅಪ್ಪ ಎಂದಿನಂತೆ ಬೆಳಿಗ್ಗೆ ಮನೆಯಿಂದ ಇತರ ಮಕ್ಕಳ ಜೊತೆ ರಾಜ್ಯ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಶಾಲೆಗೆಂದು ಬಂದಿದ್ದಳು. ಈ ಹಿನ್ನೆಲೆಯಲ್ಲಿ ನಗರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿ ಪತ್ತೆಯಾಗುವುದರೊಂದಿಗೆ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!