ತಾಲೂಕು ಸುದ್ದಿ

ಪುತ್ತೂರು : ನಗರಸಭಾ ಉಪಚುನಾವಣೆ: ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ.

Click below to Share News

ಪುತ್ತೂರು : ಪುತ್ತೂರು ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಈಗಾಗಲೇ ಘೋಷಣೆಯಾಗಿದ್ದು, ಇಂದು ನಾಮಪತ್ರ ಸಲ್ಲಿಕೆ ನಡೆಯಿತು.

ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಬಿಜೆಪಿಯಿಂದ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಜಿಲ್ಲಾಧಿಕಾರಿಗಳ ಅಧಿಸೂಚನೆಯ ಮೇರೆಗೆ ಡಿ 8 ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಇಂದು ಡಿ. 15 ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಇಂದು ನಾಮ ಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳು ಹಾಗೂ ಪಕ್ಷದ ಪ್ರಮುಖರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ ನೀಡಿ ವಿಶೇಷ ಪೂಜೆ

ಹಾಗೂ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಡಾ. ಸುರೇಶ್ ಪುತ್ತೂರಾಯ ರವರು ಅಭ್ಯರ್ಥಿಗಳಿಗೆ ಹಾರ ಹಾಕಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಜೀವಂಧರ್ ಜೈನ್ ಸಹಿತ ಹಲವು ಬಿಜೆಪಿ
ಪ್ರಮುಖರು ಉಪಸ್ಥಿತರಿದ್ದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!