ಪುತ್ತೂರು: ನಿಡ್ಪಳ್ಳಿ, ಆರ್ಯಾಪು ಗ್ರಾ.ಪಂ ಉಪ ಚುನಾವಣೆ.
ಪುತ್ತೂರು: ತಾಲೂಕಿನ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾ.ಪಂಗಳಲ್ಲಿ ತೆರವಾಗಿರುವ ತಲಾ ಒಂದು ಸ್ಥಾನಗಳಿಗೆ ಜು.23ರಂದು ಉಪ ಚುನಾವಣೆಯು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ನಿಡ್ಪಳ್ಳಿಯಲ್ಲಿ ಶೇ.87.14 ಹಾಗೂ ಆರ್ಯಾ ಪುನಲ್ಲಿ ಶೇ.80.73 ಮತದಾನವಾಗಿದೆ.
ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು ಸಂಜೆ 5 ಗಂಟೆಯ ತನಕ ನಡೆಯಿತು. ನಿಡ್ಪಳ್ಳಿ ಗ್ರಾ.ಪಂನ ಉಪ ಚುನಾವಣೆಯು ನಿಡ್ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್ಯಾಪು ಗ್ರಾ.ಪಂನ ಉಪ ಚುನಾವಣೆ ಕುಂಜೂರು ಪಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಪ್ರಕ್ರಿಯೆಗಳು ನಡೆಯಿತು.
ಒಟ್ಟು 607 ಮತದಾರರನ್ನು ಹೊಂದಿರುವ ನಿಡ್ಪಳ್ಳಿ ವಾರ್ಡ್ 1ರ ಉಪ ಚುನಾವಣೆಯಲ್ಲಿ 254 ಪುರುಷರು ಹಾಗೂ 257 ಮಹಿಳೆಯರು ಸೇರಿದಂತೆ ಒಟ್ಟು 529 ಮಂದಿ ಮತ ಚಲಾಯಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್ 2ರಲ್ಲಿ ಒಟ್ಟು 1237 ಮಂದಿ ಮತದಾರರನ್ನು ಹೊಂದಿದ್ದು ಇದರಲ್ಲಿ 515 ಪುರುಷರು ಹಾಗೂ 484 ಮಹಿಳೆಯರು ಸೇರಿದಂತೆ ಒಟ್ಟು 999 ಮಂದಿ ಮತದಾರರು ಮತ ಚಲಾಯಿಸಿದ್ದಾರೆ.
ಜು.26 ಫಲಿತಾಂಶ: ಉಪ ಚುನಾವಣೆಯ ಮತ ಎಣಿಕೆ ಕಾರ್ಯಗಳು ಫೆ.26ರಂದು ತಾಲೂಕು ಆಡಳಿತ ಕೇಂದ್ರದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ನಡೆದು ಫಲಿತಾಂಶ ಘೋಷಣೆಯಾಗಲಿದೆ.