ತಾಲೂಕು ಸುದ್ದಿಸಮಗ್ರ ಸುದ್ದಿ
ವಿಧಾನಸಭಾ ಚುನಾವಣೆ 2023ರ ಮತ ಎಣಿಕೆಯ ಹಿನ್ನಲೆಯಲ್ಲಿ ಇಂದು ನಿಷೇದಾಜ್ಞೆ ಜಾರಿ
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಏಣಿಕೆ ಇಂದು ಬೆಳಗ್ಗಿನಿಂದ ಆರಂಭಗೊಳ್ಳುವ ಹಿನ್ನಲೆಯಲ್ಲಿ ಬೆಳಗ್ಗೆ 5.00 ಗಂಟೆಯಿಂದ ಮಧ್ಯರಾತ್ರಿ 12.00 ವರೆಗೆ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳದಲ್ಲಿ 5 ಕ್ಕಿಂತ ಹೆಚ್ಚು ಜನರು ಒಂದೇ ಜಾಗದಲ್ಲಿ ಗುಂಪು ಸೇರುವುದು, ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭ, ವಿಜಯೋತ್ಸವ ಆಚರಣೆ, ಬಹಿರಂಗ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಇತರೆ ಪ್ರತಿಭಟನೆಗಳಿಗೆ ಅವಕಾಶವಿಲ್ಲ,
ಜೊತೆಗೆ ಜಿಲ್ಲಾವ್ಯಾಪ್ತಿಯಲ್ಲಿ ಮಧ್ಯ ಮಾರಾಟಕ್ಕೆ ಅವಕಾಶವಿರುವುದಿಲ್ಲ,ನಿಷೇದಾಜ್ಞೆ ನಿರ್ಭಂಧನೆಗಳನ್ನು ಉಲ್ಲಂಘಸುವವರ ವಿರುದ್ಧ ಭಾರತೀಯ ದಂಡಸಂಹಿತೆಯ 188ರ ಅಡಿಯಲ್ಲಿ ಕಾನೂನುಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾನ್ಯ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.