ತಾಲೂಕು ಸುದ್ದಿ
ಸಂಟ್ಯಾರು: ಚಾಲಕನ ನಿಯಂತ್ರಣ ತಪ್ಪಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು(Car)!!
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ (Car)ಕಾರೊಂದು ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ.
ಸೋಮವಾರ ಘಟನೆ ನಡೆದಿದ್ದು, ವಾಹನಗಳು ಜಖಂಗೊಂಡಿವೆ.
ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಧಾವಿಸಿದ್ದಾರೆ.