ತಾಲೂಕು ಸುದ್ದಿ

ಬಲ್ನಾಡು :ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ವಂಶಿ ಮೃತ್ಯು

Click below to Share News

ಪುತ್ತೂರು:ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ. ಬಲ್ನಾಡು ಬಂಗಾರಡ್ಕ ನಿವಾಸಿ ವಿದ್ಯಾರ್ಥಿನಿಯೊಬ್ಬರು ಜೂ.2ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ಅವರ ಮಗಳು ವಂತಿ ಬಿ.ಕೆ (17ವ)ಮೃತಪಟ್ಟವರು.ಅವರು ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು.ಈ ನಡುವೆ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತರು ತಾಯಿ ಬಿ.ಎಸ್ ಜಯಲತಾ ಮತ್ತು ಸಹೋದರನನ್ನು ಅಗಲಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!