ತಾಲೂಕು ಸುದ್ದಿ

ಬಿಜೆಪಿ ನಾಯಕರ ಫೊಟೋಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ

Click below to Share News

ಪುತ್ತೂರು : ಬಿಜೆಪಿ ನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾದ ಆರೋಪಿಗಳಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ . ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವನ್ನು ಹಾಕಿ , ಅದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಶೀರ್ಷಿಕೆ ನೀಡಿ , ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು . ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು . ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನುವ ಯುವಕರ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ . ನಡೆದಾಡಲು ಕಷ್ಟಪಡುವ ರೀತಿಯ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ .

ಈ ಬಗ್ಗೆ ಡಿವೈಎಸ್ಪಿ ಅವರಲ್ಲಿ ವಿಚಾರಿಸಿದಾಗ ಪುತ್ತೂರು ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 37/23 ರಲ್ಲಿ ದಸ್ತಗಿರಿ ಮಾಡಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವುದಾಗಿ ಸಾಮಾಜಿಕ ಜಾಲತಾಣ ಗಳಲ್ಲಿ ಸುದ್ದಿ ಪ್ರಸಾರ ವಾಗುತ್ತಿದ್ದು , ಈ ಬಗ್ಗೆ ಸತ್ಯಾಂಶ ತಿಳಿದುಕೊಳ್ಳಲು ವಿಚಾರಣೆ ಕೈಗೊಳ್ಳಲಾಗುವುದು ಎಂದಿದ್ದಾರೆ .


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!