ತಾಲೂಕು ಸುದ್ದಿ

ಆ್ಯಕ್ಟೀವಾ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಹಿಂಪ, ಬಜರಂಗದಳ ಕಾರ್ಯಕರ್ತ ಕೀರ್ತನ್ ಗೌಡ ಮೃತ್ಯು!!

Click below to Share News

ಪುತ್ತೂರು : ಆ್ಯಕ್ಟೀವಾ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕೆಯ್ಯರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ ಘಟಕ ತಿಂಗಳಾಡಿಯ ಸಹ ಗೋ ರಕ್ಷಕ ಪ್ರಮುಖ್ ಕೀರ್ತನ್ ಗೌಡ (22) ಮೃತಪಟ್ಟವರು.

ಸೆ. 10ರಂದು ಮಧ್ಯರಾತ್ರಿ ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕೀರ್ತನ್ ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಕೀರ್ತನ್ ಗೌಡ ಅವರ ಆ್ಯಕ್ಟೀವಾ ಅಪಘಾತದ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!